ಅಭಿಪ್ರಾಯ / ಸಲಹೆಗಳು

ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆ

ಈ ಯೋಜನೆಯಡಿ ಫಲಾನುಭವಿಗಳಿಗೆ ದೊರಕುವ ಸೌಲಭ್ಯಗಳು ಕೆಳಗಿನಂತಿವೆ:-

(ಅ) ಸ್ಮಾರ್ಟ್ ಕಾರ್ಡ್ ಸೌಲಭ್ಯ: ಯೋಜನೆಯಡಿ 11 ಅಸಂಘಟಿತ ವಲಯಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನು ಏಕ ಶೀರ್ಷಿಕೆ ಮತ್ತು ಏಕ ಚಿಹ್ನೆಯಡಿ ನೋಂದಾಯಿಸಿ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯಡಿ ಸ್ಮಾರ್ಟ್ ಕಾರ್ಡ್ ನೀಡಲು ಕ್ರಮಕೈಗೊಂಡಿದೆ.

ಈ ದಿಶೆಯಲ್ಲಿ, ಯೋಜನೆಯಡಿ ನೋಂದಾಯಿಸಲು 3 ಲಕ್ಷ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಮುದ್ರಿಸಿ ಉದ್ಧೇಶಿತ ವಲಯದ ಕಾರ್ಮಿಕರು, ಸಂಘಗಳು ಹಾಗೂ ಸಂಘಟನೆಗಳಲ್ಲದೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ವಿತರಿಸಲಾಗಿದೆ. ಅವುಗಳಲ್ಲಿ 60,763 ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಮಂಡಳಿಯು ಸ್ವೀಕರಿಸಿದ್ದು, ಸ್ಮಾರ್ಟ್ ಕಾರ್ಡ್ ಮುದ್ರಿಸಲು ಮೆ|| ಕಿಯೋನಿಕ್ಸ್ ಸಂಸ್ಥೆಗೆ ನೀಡಲಾಗಿದೆ. ಈಗಾಗಲೇ 25,063 ಸ್ಮಾರ್ಟ್ ಕಾರ್ಡ್ಗಳನ್ನು ಮುದ್ರಿಸಿ ವಿತರಿಸಲಾಗಿದೆ.   

 (ಆ) ಶ್ರಮ ಸಮ್ಮಾನ ಹಾಗೂ ವಿಶೇಷ ಪುರಸ್ಕಾರ ಪ್ರಶಸ್ತಿ: ಪ್ರಸಕ್ತ ಸಾಲಿನಿಂದ, 11 ಅಸಂಘಟಿತ ವಲಯಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ” ವಲಯಗಳಲ್ಲಿ  ವಿಶೇಷ ಸಾಧನೆ ಮಾಡಿದ ಕಾರ್ಮಿಕರನ್ನು ಗುರುತಿಸಿ, ವಲಯಕ್ಕೆ ತಲಾ 1 ರಂತೆ ಪ್ರತಿ ಜಿಲ್ಲೆಗೆ 11 ರಂತೆ ಒಟ್ಟು 330 ಕಾರ್ಮಿಕರಿಗೆ “ಶ್ರಮ ಸಮ್ಮಾನ ಪ್ರಶಸ್ತಿ” ಹಾಗೂ ವಲಯಕ್ಕೆ ತಲಾ 10 ರಂತೆ ಪ್ರತಿ ಜಿಲ್ಲೆಗೆ 110 ರಂತೆ ಒಟ್ಟು 3300 ಕಾರ್ಮಿಕರಿಗೆ “ವಿಶೇಷ ಪುರಸ್ಕಾರ” ನೀಡಲಾಗುತ್ತಿದೆ. ಶ್ರಮ ಸಮ್ಮಾನ ಪ್ರಶಸ್ತಿಯು ರೂ.10,000/-ಗಳ ನಗದು ಮೌಲ್ಯ, ಸ್ಮರಣಿಕೆ ಹಾಗೂ ಪ್ರಶಂಸಾಪತ್ರ ಒಳಗೊಂಡಿದೆ ಮತ್ತು ವಿಶೇಷ ಪುರಸ್ಕಾರವು ರೂ.1,000/-ಗಳ ನಗದು ಮೌಲ್ಯ, ಸ್ಮರಣಿಕೆ ಹಾಗೂ ಪ್ರಶಂಸಾಪತ್ರ ಒಳಗೊಂಡಿದೆ. ಆಯ್ಕೆ ಮಾಡಿದ ಕಾರ್ಮಿಕರಿಗೆ ಮಾರ್ಚ್ 01 ರಂದು ನಡೆದ ಕಾರ್ಮಿಕ ಸಮ್ಮಾನ ದಿನಾಚರಣೆಯ ಸಂದರ್ಭದಲ್ಲಿ ಸದರಿ 11 ವರ್ಗಗಳ 330 ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿ ಹಾಗೂ 3300 ಕಾರ್ಮಿಕರಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗಿದೆ.

 (ಇ) ಕಾರ್ಮಿಕ ಸೇವಾ ಕೇಂದ್ರ : ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ 2008ರ ಕಲಂ 9 ರನ್ವಯ ಫಲಾನುಭವಿಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ಲಭ್ಯವಿರುವ ಎಲ್ಲಾ ಯೋಜನೆಗಳ ಕುರಿತು ಮಾಹಿತಿ ನೀಡಲು, ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಅವಶ್ಯಕವಿರುವ ದಾಖಲಾತಿಗಳನ್ನು ಸಿದ್ಧಪಡಿಸಲು ಹಾಗೂ ನಿಗಧಿಪಡಿಸಿದ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಸಂಬಂಧಪಟ್ಟವರಿಗೆ ರವಾನಿಸಲು ಸಹಾಯವಾಗುವಂತೆ ರಾಜ್ಯದ ಎಲ್ಲಾ 175 ತಾಲ್ಲೂಕುಗಳಲ್ಲಿ ತಲಾ ಒಂದರಂತೆ ಕಾರ್ಮಿಕ ಸೇವಾ ಕೇಂದ್ರಗಳನ್ನು ತೆರೆಯಲು ನಿರ್ಣಯಿಸಿದ್ದು, ಈಗಾಗಲೇ 147 ತಾಲ್ಲೂಕುಗಳಲ್ಲಿ ಕಾರ್ಮಿಕ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

 ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಮಂಡಳಿಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಮಾಹಿತಿ, ಸಹಾಯ ಹಾಗೂ ಸೌಲಭ್ಯಗಳನ್ನು, ಸದರಿ ಸೇವಾ ಕೇಂದ್ರಗಳಲ್ಲಿ ಕಾರ್ಮಿಕ ಬಂಧುಗಳ ಮೂಲಕ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ.

(ಈ) ಭವಿಷ್ಯನಿಧಿ ಸೌಲಭ್ಯ: ಮೇಲಿನ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ದೃಷ್ಠಿಯಿಂದ ವಂತಿಕೆ ಆಧಾರಿತ ಭವಿಷ್ಯನಿಧಿ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ.

 (ಉ) ವಿದೇಶಿ ಉದ್ಯೋಗ ಕೋಶ International Migration Centre-Karnataka(IMCK):- ಪ್ರತಿ ವರ್ಷ ರಾಜ್ಯದಾದ್ಯಂತ ಪರಿಣಿತ, ಅರೆಪರಿಣಿತ ಹಾಗೂ ಪರಿಣಿತರಲ್ಲದ ಸಹಸ್ರಾರು ಕಾರ್ಮಿಕರು ಉದ್ಯೋಗಕ್ಕಾಗಿ ವಿದೇಶಗಳಿಗೆ ತೆರಳುತ್ತಿದ್ದು, ಮಧ್ಯವರ್ತಿ ಸಂಸ್ಥೆಗಳಿಂದ ಶೋಷಣೆಗೆ ಒಳಗಾಗುತ್ತಿರುವುದನ್ನು ಗಮನಿಸಿ ಅವರ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿದೇಶಿ ಉದ್ಯೋಗ ಕೋಶ (International Migration Centre-Karnataka(IMC-K))  ವನ್ನು ಸ್ಥಾಪಿಸಲು ನಿರ್ಧರಿಸಿದ್ದು, ಅರೆಪರಿಣಿತ ಹಾಗೂ ಪರಿಣಿತರಲ್ಲದ ಕಾರ್ಮಿಕರಿಗೆ ಸಂಬಂಧಪಟ್ಟ ಹೊಣೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ವಹಿಸಿಕೊಂಡಿದೆ.

 ಈ ದಿಶೆಯಲ್ಲಿ Protector General of Emigrants (PGE), Ministry of External Affairs (MEA) ಭಾರತ ಸರ್ಕಾರ ಇವರೊಂದಿಗೆ ವ್ಯವಹರಿಸಲಾಗಿದ್ದು, ಮಂಡಳಿಯನ್ನು Recruitment Agency(RA)  ಆಗಿ ಪರಿಗಣಿಸಲು ಒಪ್ಪಿಕೊಂಡಿರುವುದಾಗಿ ದಿನಾಂಕ:27-06-2019 ರಂದು ಇ-ಮೇಲ್ ಮೂಲಕ ತಿಳಿಸಿರುತ್ತಾರೆ ಹಾಗೂ ಈ ಕುರಿತು ರಾಷ್ಟ್ರೀಕೃತ ಬ್ಯಾಂಕ್‌ನಿಂದ ರೂ.50.00 ಲಕ್ಷಗಳ ಗ್ಯಾರಂಟಿ ನೀಡುವಂತೆ ತಿಳಿಸಿದ್ದು, ಸದರಿ ಪ್ರಮಾಣ ಪತ್ರವು 8 ವರ್ಷಗಳ ಅವಧಿಗೆ ಊರ್ಜಿತದಲ್ಲಿರುವುದಾಗಿ ತಿಳಿಸಿರುತ್ತಾರೆ. 

ಇತ್ತೀಚಿನ ನವೀಕರಣ​ : 30-07-2019 10:54 AM ಅನುಮೋದಕರು: Bharmarajappa M K



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರ್ಮಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080