ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ

() ಅಪಘಾತ ಪರಿಹಾರ ಸೌಲಭ್ಯ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇಂತಹ ಕಾರ್ಮಿಕರು ಅಪಘಾತಕ್ಕೀಡಾಗಿ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಚಾಲಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು  ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆ”ಎನ್ನುವ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು 2016-17ನೇ ಸಾಲಿನಲ್ಲಿ ಚಾಲಕರೊಂದಿಗೆ ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೂ ಸಹ ಅಪಘಾತ ವಿಮಾ ಸೌಲಭ್ಯವನ್ನು ವಿಸ್ತರಿಸಲು ಪರಿಷ್ಕೃತ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೆ ತಂದಿರುತ್ತದೆ.

 ಈ ಯೋಜನೆಯಡಿ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯದಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲನಾ ಪರವಾನಗಿ ಪಡೆದ ಚಾಲಕರು ತಕ್ಷಣದಿಂದ  ಫಲಾನುಭವಿಯೆಂದು ಪರಿಗಣಿಸುತ್ತಿದ್ದು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಯೋಜನೆಯಡಿ ನೋಂದಣಾಧಿಕಾರಿಗಳಲ್ಲಿ ನೋಂದಾಯಿಸಬೇಕಾಗುತ್ತದೆ.

 ಯೋಜನೆಯಡಿ ಸಾಧನೆ:- ಯೋಜನೆಯಡಿ ಸಾರಿಗೆ ಇಲಾಖೆಯಿಂದ ಸಾರಿಗೆ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿ ಹೊಂದಿದ ಒಟ್ಟು 7,78,485 ಚಾಲಕರನ್ನು ಯೋಜನೆಯ ವ್ಯಾಪ್ತಿಗೆ ತರಲಾಗಿದೆ.‌

ಕ್ಲೈಮ್‌ ವಿತರಣೆ (19-07-2019

 

ಕ್ರ ಸಂ

ವಿವರಣೆ

ಪ್ರಕರಣ

ಪರಿಹಾರದ ಮೊತ್ತ

1

ಮರಣ

387

ರೂ.98350000/-

2

ಶಾಶ್ವತ ದುರ್ಬಲತೆ

04

ರೂ.360000/-

3

ಆಸ್ಪತ್ರೆ ವೆಚ್ಚದ ಮರುಪಾವತಿ/ತಾತ್ಕಾಲಿಕ ದುರ್ಬಲತೆ

126

ರೂ.4442978/-

ಒಟ್ಟು

517

ರೂ.103152978/-

 

ಯೋಜನೆಯ ವಿಶೇಷತೆಗಳು:-

  1. ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
  2. ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸುತ್ತದೆ.
  3. ಯೋಜನೆಗೆ ವಯಸ್ಸಿನ ಮಿತಿ 20 ರಿಂದ 70 ವರ್ಷಗಳು.
  4. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ.

ಯೋಜನೆಯ ಷರತ್ತುಗಳು:

  1. ಚಾಲಕರು ಕರ್ನಾಟಕ ರಾಜ್ಯದಲ್ಲಿ ಸಾರಿಗೆ ಇಲಾಖೆಯಿಂದ ಪಡೆದ ಊರ್ಜಿತ ಚಾಲನಾ ಪರವಾನಗಿ ಹೊಂದಿರಬೇಕು. ಅಂತಹ ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೆÃಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ.
  1. ನಿರ್ವಾಹಕರು ಹಾಗೂ ಕ್ಲೀನರ್‌ಗಳನ್ನು ನೋಂದಾಯಿಸಲು ಸದ್ಯದಲ್ಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಯೋಜನೆಯಡಿ ದೊರಕುವ ವಿಮಾ ಸೌಲಭ್ಯಗಳು:-

  • 2012-13ನೇ ಸಾಲಿನಿಂದ ದಿನಾಂಕ 30-11-2017ರವರೆಗೆ ಮರಣಹೊಂದಿದ ಪ್ರಕರಣಗಳಲ್ಲಿ ಮೃತರ ನಾಮನಿರ್ದೇಶಿತರಿಗೆ ರೂ.2 ಲಕ್ಷ ಪರಿಹಾರ.
  • ದಿನಾಂಕ 01-12-2017ರಿಂದ ಸಂಭವಿಸುವ ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ.
  • ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ರೂ.2 ಲಕ್ಷದ ವರೆಗೆ ಪರಿಹಾರ.
  • ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ-
    • ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 50,000/- ರವರೆಗೆ; ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಹಾಗೂ
    • 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 1 ಲಕ್ಷದ ವರೆಗೆ ಅಥವಾ  ನಿಖರ ಆಸ್ಪತ್ರೆ ವೆಚ್ಚ,  ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಮರುಪಾವತಿ ಪಡೆಯಬಹುದು.

 (ಆ) ಶೈಕ್ಷಣಿಕ ಧನ ಸಹಾಯ:

 2018-19ನೇ ಸಾಲಿನಿಂದ ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000/- ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದ್ದು, ಈವರೆಗೆ ಒಟ್ಟು 84 ಫಲಾನುಭವಿ ವಿದ್ಯಾರ್ಥಿಗಳಿಗೆ ರೂ.8,40,000/-ಗಳ ಸೌಲಭ್ಯ ನೀಡಲಾಗಿದೆ.

  • ಶೈಕ್ಷಣಿಕ ಧನ ಸಹಾಯಕ್ಕಾಗಿ ನಿಗದಿತ ನಮೂನೆಯಲ್ಲಿ ಮೃತರಾದ/ಸಂಪೂರ್ಣ ಅಂಗ ದುರ್ಬಲತೆ ಉಂಟಾದ ಚಾಲಕರ ಇಬ್ಬರು ಮಕ್ಕಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ನೇರವಾಗಿ ಅಥವಾ ತಾಲ್ಲೂಕು/ಜಿಲ್ಲಾ ಮಟ್ಟದ ಕಾರ್ಮಿಕ ಇಲಾಖಾ ಕಚೇರಿಯಲ್ಲಿ ಸಲ್ಲಿಸಿದ್ದಲ್ಲಿ ಅರ್ಜಿಗಳನ್ನು ಪರಿಶೀಲಿಸಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

 

(ಇ)  ಸ್ಮಾರ್ಟ್ ಕಾರ್ಡ್ ಸೌಲಭ್ಯ:-                                             

       ಯೋಜನೆಯ ಕುರಿತು ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸಲು ಎಲ್ಲಾ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಈಗಾಗಲೇ 90,315 ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದ್ದು, ಉಳಿದವರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

 

(ಈ) ಶ್ರಮ ಸಮ್ಮಾನ ಹಾಗೂ ವಿಶೇಷ ಪುರಸ್ಕಾರ ಪ್ರಶಸ್ತಿ: ಸುರಕ್ಷತಾ ಚಾಲನೆಯನ್ನು ಉತ್ತೇಜಿಸುವ ಉದ್ದೇಶದಿಂದ, ಉತ್ತಮ ಹಾಗೂ ಸುರಕ್ಷತಾ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಮಾರ್ಚ್-01 ರಂದು ನಡೆಯುವ “ಕಾರ್ಮಿಕ ಸಮ್ಮಾನ ದಿನಾಚರಣೆ”ಯ ಸಂದರ್ಭದಲ್ಲಿ “ಶ್ರಮ ಸಮ್ಮಾನ ಪ್ರಶಸ್ತಿ”, “ವಿಶೇಷ ಪುರಸ್ಕಾರ” ಹಾಗೂ ಸಮಾಧಾನಕರ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.     

  • ಪ್ರಸಕ್ತ ಸಾಲಿನಲ್ಲಿ, ಮಾರ್ಚ್ 01 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕ ಸಮ್ಮಾನ ದಿನಾಚರಣೆ ಆಚರಿಸಿ ಆಯ್ಕೆಗೊಂಡ 60 ಚಾಲಕರಿಗೆ “ಶ್ರಮ ಸಮ್ಮಾನ ಪ್ರಶಸ್ತಿ”, 300 ಚಾಲಕರಿಗೆ “ವಿಶೇಷ ಪುರಸ್ಕಾರ” ಹಾಗೂ 1500 ಚಾಲಕರಿಗೆ ಸಮಾಧಾನಕರ ಪ್ರಶಸ್ತಿಗಳನ್ನು ವಿತರಿಸಲಾಗಿದೆ.
  • ಶ್ರಮ ಸಮ್ಮಾನ ಪ್ರಶಸ್ತಿಯು ರೂ.10,000/-ಗಳ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ಹೊಂದಿದ್ದು, ವಿಶೇಷ ಪುರಸ್ಕಾರವು ರೂ.1,000/-ಗಳ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ಹೊಂದಿದ್ದು, ಸಮಾಧಾನಕರ ಪ್ರಶಸ್ತಿಯು ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ಹೊಂದಿರುತ್ತದೆ.

 

(ಉ) ಅಪಘಾತ ಜೀವ ರಕ್ಷಕ ಕಾರ್ಯಕ್ರಮ:-  ವಿಶ್ವದಾದ್ಯಂತ ಸಂಭವಿಸುವ ರಸ್ತೆ ಅಪಘಾತ ಪ್ರಕರಣಗಳಲ್ಲಿ ಭಾರತವು 6ನೇ ಸ್ಥಾನ ಹೊಂದಿದೆ. ಅಪಘಾತ ಸಂಭವಿಸಿದ ಮೊದಲ 60 ನಿಮಿಷಗಳು ಸುವರ್ಣ ಅವಧಿಯಾಗಿದ್ದು, ಆ ಅವಧಿಯಲ್ಲಿ ಸೂಕ್ತ ಚಿಕಿತ್ಸೆ ದೊರೆತಲ್ಲಿ, ಪ್ರತಿ ವರ್ಷ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜೀವಗಳನ್ನು ರಕ್ಷಿಸಬಹುದಾಗಿರುತ್ತದೆ. ಅಪಘಾತಕ್ಕೊಳಗಾದವರನ್ನು ರಕ್ಷಿಸುವ ಹಂಬಲವಿದ್ದರೂ, ಪ್ರಥಮ ಚಿಕಿತ್ಸೆ ಕುರಿತು ಅರಿವಿಲ್ಲದಿರುವುದು ಹಾಗೂ ಪೋಲಿಸ್ ಠಾಣೆ ಮತ್ತು ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ಅಲೆದಾಡಬೇಕಾದ ಭಯದಿಂದ ಅಪಘಾತ ನಡೆದಾಗ ಪ್ರತ್ಯಕ್ಷದರ್ಶಿಗಳು ಹಿಂಜರಿಯುತ್ತಿರುವುದು ಕಂಡುಬರುತ್ತದೆ.

  ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಅಪಘಾತಕ್ಕೊಳಗಾಗುವ ಸಂತ್ರಸ್ತರಿಗೆ ಸ್ಥಳದಲ್ಲಿಯೇ ತುರ್ತು ಮಾನವೀಯ ಸಹಾಯ ಹಾಗೂ ಪ್ರಥಮ ಚಿಕಿತ್ಸೆಯನ್ನು ನೀಡಿ, ತದನಂತರ ಕ್ಲುಪ್ತಕಾಲದಲ್ಲಿ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ನೀಡಿದಲ್ಲಿ, ಅಪಘಾತದ ಗಾಯಾಳುಗಳನ್ನು ಪ್ರಾಣಾಪಾಯದಿಂದ ರಕ್ಷಿಸುವುದಲ್ಲದೇ, ಕುಟುಂಬದ ಆಧಾರಸ್ಥಂಭವನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ಅವರ ಕುಟುಂಬವನ್ನೂ ಸಹ ಅತಂತ್ರದಿಂದ ಪಾರುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಕೂಡಲೇ ಪ್ರಥಮ ಚಿಕಿತ್ಸೆಯನ್ನು ನೀಡಿ, ಹತ್ತಿರದ ಆಸ್ಪತ್ರೆಗೆ ಸೇರಿಸಿ, ಸಂಬಂಧಪಟ್ಟ ಪೋಲಿಸ್ ಠಾಣೆಗೆ ಮಾಹಿತಿ ನೀಡಿ, ಆ ಮೂಲಕ ಗಾಯಾಳುವಿನ ಪ್ರಾಣ ರಕ್ಷಣೆಯನ್ನು ಮಾಡುವುದನ್ನು ಉತ್ತೆÃಜಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು 2016-17ನೇ ಸಾಲಿನಲ್ಲಿ “ಅಪಘಾತ ಜೀವ ರಕ್ಷಕ ಕಾರ್ಯಕ್ರಮ”ವನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಕಾರ್ಮಿಕ ಇಲಾಖೆ, ಒಳಾಡಳಿತ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗೃಹ ಇಲಾಖೆಗಳು ಹಾಗೂ ಇತರ ನಿಯೋಗಿಗಳ ಸಹಯೋಗದೊಂದಿಗೆ ಜಾರಿಗೊಳಿಸುತ್ತಿದೆ. 2016-17ನೇ ಸಾಲಿನಲ್ಲಿ ಯೋಜನೆಯನ್ನು ರಾಜ್ಯದ ಆಯ್ದ 9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದು, 2017-18ನೇ ಸಾಲಿನಿಂದ ಈ ಯೋಜನೆಯನ್ನು ರಾಜ್ಯದಾದ್ಯಂತ ಎಲ್ಲಾ 30 ಜಿಲ್ಲೆಗಳಿಗೂ ವಿತರಿಸಲಾಗಿದೆ.

 

ಪ್ರೋತ್ಸಾಹಧನ:-

    ಅಪಘಾತ ಜೀವ ರಕ್ಷಕರಿಗೆ ಅಪಘಾತ ಸಂಭವಿಸಿದ ದಿನಾಂಕದಿಂದ 6 ತಿಂಗಳ ಅವಧಿಯೊಳಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಈ ಕೆಳಗೆ ಸೂಚಿಸಿರುವ ದಾಖಲೆಗಳನ್ನು ಒದಗಿಸಿದಲ್ಲಿ, ಮಂಡಳಿಯ ವತಿಯಿಂದ ಒಂದು ತಿಂಗಳೊಳಗಾಗಿ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು.

 

ಈ ಯೋಜನೆಯಡಿ ಸಾಧನೆ:-2016-17ನೇ ಸಾಲಿನಲ್ಲಿ 2,701 ಮತ್ತು 2017-18ನೇ ಸಾಲಿನಲ್ಲಿ 12,176 ಚಾಲಕರುಗಳಿಗೆ ಈ ಯೋಜನೆಯಡಿ ಪ್ರಥಮ ಚಿಕಿತ್ಸಾ ತರಬೇತಿ ನೀಡಲಾಗಿದೆ.  ಪ್ರಸಕ್ತ ಸಾಲಿನಲ್ಲಿ 25,000 ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡುವ ಗುರಿ ಹೊಂದಿದ್ದು, ಈವರೆಗೆ 11,460 ಚಾಲಕರಿಗೆ ತರಬೇತಿ ನೀಡಲಾಗಿದೆ.

ಇತ್ತೀಚಿನ ನವೀಕರಣ​ : 30-07-2019 10:54 AM ಅನುಮೋದಕರು: Bharmarajappa M K



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರ್ಮಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080