ಅಭಿಪ್ರಾಯ / ಸಲಹೆಗಳು

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಲ್ಯಾಣ ಯೋಜನೆಗಳು

ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಮಾಸಿಕ ಸಂಬಳ ರೂ.15,000/-ಗಳಿಗೆ ಮೀರಿರಬಾರದು.ವಯೋಮಿತಿ 18-60.

  1. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ: ಪ್ರೌಡ ಶಾಲೆ (8 ರಿಂದ 10ನೇ ತರಗತಿವರೆಗೆ)ರೂ.3000/ ಪಿಯುಸಿ/ಡಿಪ್ಲೊಮಾ/ಐಟಿಐ/ಟಿಸಿಹೆಚ್ ಇತ್ಯಾದಿ ರೂ. 4000/-ಪದವಿ ತರಗತಿಗೆ ರೂ 5000/ ಸ್ನಾಕೋತ್ತರ ಪದವಿ ತರಗತಿಗಳಿU ರೂ.5000/-ಇಂಜಿನೀಯರಿಂಗ್/ವೈದ್ಯಕೀಯರೂ.10,000/-ಗಳ ಪ್ರೋತ್ಸಾಹ ಧನ ನೀಡಲಾಗುವುದು. (ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಶೇ.50 ಪ.ಜಾ / ಪ.ಪಂ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)
  2. ಕಾರ್ಮಿಕರಿಗೆ ವೈದ್ಯಕೀಯ ನೆರವು : ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿ ಟ್ರಾನ್ಸ್‍ಪ್ಲಾಂಟೇಷನ್, ಕ್ಯಾನ್ಸರ್, ಆಂಜಿಯೋಪ್ಲಾಸ್ಟಿ, ಕಣ್ಣು, ಅರ್ಥೊಪೆಡಿಕ್, ಗರ್ಭಕೋಶದ ಶಸ್ತ್ರ ಚಿಕಿತ್ಸೆ, ಗಾಲ್ ಬ್ಲಾಡರ್ ತೊಂದರೆ, ಮೆದುಳಿನ ರಕ್ತಸ್ರಾವ ಚಿಕಿತ್ಸೆಗೆ ರೂ. 1,000/- ದಿಂದ ರೂ,10,000/-ವರೆಗೆ ಮತ್ತು ಆರೋಗ್ಯ ತಪಾಸಣೆಗೆ ರೂ. 500/-ರಿಂದ ರೂ. 1000/-ವರೆಗೆ ಧನ ಸಹಾಯ ನೀಡಲಾಗುವುದು.
  3. ಕಾರ್ಮಿಕರಿಗೆ ಕೆಲಸದ ವೇಳೆಯಲ್ಲಿ ಅಪಘಾತವಾದಲ್ಲಿ ಧನ ಸಹಾಯ: ಕನಿಷ್ಠ ರೂ. 1000/- ಗರಿಷ್ಠ ರೂ 3000/- ವರೆಗೆ ಧನ ಸಹಾಯ ನೀಡಲಾಗುವುದು. ಸೌಲಭ್ಯ ಪಡೆಯುವ ಕಾರ್ಮಿಕರು ಅಪಘಾತವಾದ 3 ತಿಂಗಳೊಳಗೆ ಅರ್ಜಿ ಸಲ್ಲಿಸತಕ್ಕದ್ದು.

 

ಈ ಕೆಳಗಿನ ಯೋಜನೆಗಳಿಗೆ ಮಾಸಿಕ ಸಂಬಳದ ಮಿತಿಯಿರುವುದಿಲ್ಲ. ವಯೋಮಿತಿ 18- 60.

  1. ಮೃತ ಕಾರ್ಮಿಕನ ಅಂತ್ಯ ಸಂಸ್ಕಾರಕ್ಕೆ ಧನ ಸಹಾಯ :ಈ ಯೋಜನೆಯ ಸೌಲಭ್ಯ ಪಡೆಯಬೇಕಾದರೆ ಮೃತರ ಕುಟುಂಬದ ಅವಲಂಬಿತರು  ಕಾರ್ಮಿಕ ಮೃತ ಪಟ್ಟ 6 ತಿಂಗಳೊಳಗೆ ನಿಗದಿತ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖ ಲೆಗಳೊಂದಿಗೆ ಸಲ್ಲಿಸಿದಲ್ಲಿ,  ಧನ ಸಹಾಯ ರೂ.5,000/ ನೀಡಲಾಗುವುದು.
  2. ವಾರ್ಷಿಕ  ವೈಧ್ಯಕೀಯ ತಪಾಸಣೆಯನ್ನು ನಡೆಸುವ ಟ್ರೇಡ್ ಯೂನಿಯನ್/ಸಂಸ್ಥೆಗಳಿಗೆ ಧನಸಹಾಯ : ನೋಂದಾಯಿತ ಕಾರ್ಮಿಕ ಸಂಘಟನೆಗಳು/ಸರ್ಕಾರೇತರ ಸಂಸ್ಥೆಗಳು ಕಲ್ಯಾಣ ಆಯುಕ್ತರ ಪೂರ್ವಾನುಮತಿಯೊಂದಿಗೆ ನಡೆಸುವ ಆರೋಗ್ಯ ತಪಾಸಣೆ ಶಿಬಿರಕ್ಕೆ ರೂ. 30,000/- ವರೆಗೆ ಧನ ಸಹಾಯ ನೀಡಲಾಗುವುದು. ಒಂದು ಸಂಘಟನೆಗೆ ವರ್ಷದಲ್ಲಿ ಒಂದು ಬಾರಿ ಮಾತ್ರ ಈ ಸೌಲಭ್ಯ ನೀಡಲಾಗುವುದು.
  3. ವಾರ್ಷಿಕ ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳುವ ನೊಂದಾಯಿತ ಕಾರ್ಮಿಕ ಸಂಘಗಳಿಗೆ ಧನಸಹಾಯ : ನೋಂದಾಯಿತ ಕಾರ್ಮಿಕ ಸಂಘಟನೆಗಳು ಕಲ್ಯಾಣ ಆಯುಕ್ತರ ಪೂರ್ವಾನುಮತಿಯೊಂದಿಗೆ ವಾರ್ಷಿಕ ಕ್ರೀಡಾ ಚಟುವಟಿಕೆ ಹಮ್ಮಿಕೊಂಡಲ್ಲಿ ರೂ. 50,000/- ದವರೆಗೆ ಧನ ಸಹಾಯ ನೀಡಲಾಗುವುದು. ವರ್ಷದಲ್ಲಿ ಒಂದು ಸಂಘಟನೆಗೆ ಒಂದು ಬಾರಿ ಮಾತ್ರ ಈ ಸೌಲಭ್ಯ ನೀಡಲಾಗುವುದು.
  4. ಮಂಡಳಿಯ ಸಮುದಾಯ ಭವನಗಳು  :ಬೆಂಗಳೂರಿನ ಬಾಪೂಜಿನಗರ, ಪೀಣ್ಯ ಬಾಗಲಗುಂಟೆ, ಬಿಜಾಪುರ ಮತ್ತು ಗದಗ್ನಲ್ಲಿ ಮಂಢಲಿಯಿಂದ ನಿರ್ಮಿಸಿರುವ ಕಾರ್ಮಿಕ ಸಮುದಾಯ ಭವನಗಳನ್ನು ಸಂಘಟಿತ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಮದುವೆ ಮತ್ತು ಇನ್ನಿತರ ಸಮಾರಂಭಗಳಿಗೆ ರಿಯಾಯಿತಿ ದರದಲ್ಲಿ ಬಾಡಿಗೆಗೆ ನೀಡಲಾಗುತ್ತಿದೆ.

 

ಇತ್ತೀಚಿನ ನವೀಕರಣ​ : 16-01-2020 11:24 AM ಅನುಮೋದಕರು: Bharmarajappa M K



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಾರ್ಮಿಕ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080